TSK

TSK · ರೋಮಾಪುರದವರಿಗೆ 9:1

مراجع Treasury of Scripture Knowledge في ಕನ್ನಡ IRV.

العودة إلى المقطع

ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.

ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.

ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.

ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.

ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.

ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.