¶ ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
TSK
TSK · ರೂತಳು 1:15
مراجع Treasury of Scripture Knowledge في ಕನ್ನಡ IRV.
ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
¶ ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.
ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
‹“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.›
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”