TSK

TSK · ರೂತಳು 1:16

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.

ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.

ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.

ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.

ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.

ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

¶ ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.

ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ