¶ ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.
TSK
TSK · ರೂತಳು 2:13
مراجع Treasury of Scripture Knowledge في ಕನ್ನಡ IRV.
¶ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.
ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.