TSK

TSK · ರೂತಳು 2:14

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.

ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.

ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,

ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.

ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.

¶ ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, ‹“ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.›