TSK

TSK · ತೀತನಿಗೆ 1:2

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.

‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›

‹ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.›

‹ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.›

ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›

ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.

ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.

ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.

ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”

ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;

¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,

ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.

ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.

ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.