TSK

TSK · ತೀತನಿಗೆ 3:7

مراجع Treasury of Scripture Knowledge في ಕನ್ನಡ IRV.

العودة إلى المقطع

ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ

ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

¶ ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.

¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?