¶ ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
TSK
TSK · ಜೆಕರ್ಯ 10:2
مراجع Treasury of Scripture Knowledge في ಕನ್ನಡ IRV.
“ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.
ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.”
ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
¶ ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
¶ “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.
ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”
ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.
ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’