TSK

TSK · ಜೆಕರ್ಯ 11:4

مراجع Treasury of Scripture Knowledge في ಕನ್ನಡ IRV.

العودة إلى المقطع

ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

¶ ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.

ಆದರೆ ಯೇಸು ಹೇಳಿದ್ದೇನೆಂದರೆ ‹“ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ”› ಅಂದನು.

¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.

¶ ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.