ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
TSK
TSK · ಜೆಕರ್ಯ 13:3
مراجع Treasury of Scripture Knowledge في ಕನ್ನಡ IRV.
ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.
ಯೆಹೆಜ್ಕೇಲನು 14:9
TSK
¶ “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.
ಮತ್ತಾಯನು 10:37
TSK
‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.