TSK

TSK · ಜೆಕರ್ಯ 13:8

مراجع Treasury of Scripture Knowledge في ಕನ್ನಡ IRV.

العودة إلى المقطع

ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”

“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”

ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.

ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.

ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.”

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›

‹ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.›

‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.›

‹ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು”› ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.

ಯೇಸು ಅವರ ಕಡೆಗೆ ತಿರುಗಿಕೊಂಡು, ‹“ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.›

¶ ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

¶ ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.