TSK

TSK · ಜೆಕರ್ಯ 2:13

مراجع Treasury of Scripture Knowledge في ಕನ್ನಡ IRV.

العودة إلى المقطع

ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,

¶ ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.

ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.

ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.

ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.

ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”

“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.

¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.