TSK

TSK · ಜೆಕರ್ಯ 2:5

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.

ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.

¶ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.

¶ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.

ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

¶ ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.

ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.