TSK

TSK · ಜೆಕರ್ಯ 7:12

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.

ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.

¶ “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.

¶ “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.

ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”

‹“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ,› ‹ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ,› ‹ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”›

‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›

ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.

ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.

ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.