¶ ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.
TSK
TSK · ಜೆಕರ್ಯ 8:2
مراجع Treasury of Scripture Knowledge في ಕನ್ನಡ IRV.
ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’
¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
¶ ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.