ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
TSK
TSK · ಜೆಕರ್ಯ 8:9
مراجع Treasury of Scripture Knowledge في ಕನ್ನಡ IRV.
¶ ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
¶ ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.
ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
¶ ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.