TSK

TSK · ಚೆಫನ್ಯ 2:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.

ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

¶ ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

¶ ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.

ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.

ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.

ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.

ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.

ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.

ಚೀಯೋನ್ ಯುವತಿಯೇ, ಹೆರುವವಳಂತೆ ವೇದನೆಗೆ ಒಳಗಾಗು, ಯಾತನೆಪಡು. ನೀನೀಗ ಪಟ್ಟಣದಿಂದ ಹೊರಟು ಕಾಡಿನಲ್ಲಿ ವಾಸಿಸುತ್ತಾ ಬಾಬೆಲಿಗೆ ಸೇರುವಿ. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ಯೆಹೋವನು ಶತ್ರುಗಳ ಕೈಯಿಂದ ನಿನ್ನನ್ನು ಬಿಡಿಸುವನು.

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”

¶ ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.

ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.

ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.