TSK

TSK · ದಾನಿಯೇಲನು 4:13

مراجع Treasury of Scripture Knowledge في Kannada KJV.

العودة إلى المقطع

ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್‌ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.

ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.

ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.

ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.

ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ

ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.