TSK

TSK · ಆದಿಕಾಂಡ 1:21

مراجع Treasury of Scripture Knowledge في Kannada KJV.

العودة إلى المقطع

ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.

ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.

ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.

ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.

ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.

ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.

ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.