ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
TSK
TSK · ಆದಿಕಾಂಡ 17:21
مراجع Treasury of Scripture Knowledge في Kannada KJV.
ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.