TSK

TSK · ಆದಿಕಾಂಡ 21:23

مراجع Treasury of Scripture Knowledge في Kannada KJV.

العودة إلى المقطع

ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;

ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ

ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.

ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.

ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.

ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.

ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.

ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.

ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.