TSK

TSK · ಯೆಶಾಯ 21:4

مراجع Treasury of Scripture Knowledge في Kannada KJV.

العودة إلى المقطع

ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.

ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.

ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.

ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.

ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!

ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.

ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.

ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.

ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.