ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
TSK
TSK · ಯಾಕೋಬನು 2:21
مراجع Treasury of Scripture Knowledge في Kannada KJV.
ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.