TSK

TSK · ಯೋಹಾನನು 13:2

مراجع Treasury of Scripture Knowledge في Kannada KJV.

العودة إلى المقطع

ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.

ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.

ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.

ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?

ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.

ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.