TSK

TSK · ಯೋಹಾನನು 13:8

مراجع Treasury of Scripture Knowledge في Kannada KJV.

العودة إلى المقطع

ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.

ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.

ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ

ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.

ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.

ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.