TSK

TSK · ಯೋಹಾನನು 3:21

مراجع Treasury of Scripture Knowledge في Kannada KJV.

العودة إلى المقطع

ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.

ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.

ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.

ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.

ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.

ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ

ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.