TSK

TSK · ಯೋಹಾನನು 6:39

مراجع Treasury of Scripture Knowledge في Kannada KJV.

العودة إلى المقطع

ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.

ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.

ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

¶ ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--