TSK

TSK · ಯೋಹಾನನು 7:13

مراجع Treasury of Scripture Knowledge في Kannada KJV.

العودة إلى المقطع

ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.

ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.

ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.

ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.