TSK

TSK · ಯೋಹಾನನು 8:21

مراجع Treasury of Scripture Knowledge في Kannada KJV.

العودة إلى المقطع

ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು.

ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.

ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.

ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.

ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.

ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.