ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
TSK
TSK · ಪ್ರಲಾಪಗಳು 2:21
مراجع Treasury of Scripture Knowledge في Kannada KJV.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.
ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.