TSK

TSK · ಮಾರ್ಕನು 13:33

مراجع Treasury of Scripture Knowledge في Kannada KJV.

العودة إلى المقطع

ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.

ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.

ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.

ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.

ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.