TSK

TSK · ಮತ್ತಾಯನು 21:22

مراجع Treasury of Scripture Knowledge في Kannada KJV.

العودة إلى المقطع

ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?

ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.

ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.

ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.

ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.