TSK

TSK · ಮತ್ತಾಯನು 8:21

مراجع Treasury of Scripture Knowledge في Kannada KJV.

العودة إلى المقطع

ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.

ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.

ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,