TSK

TSK · ಅರಣ್ಯಕಾಂಡ 14:21

مراجع Treasury of Scripture Knowledge في Kannada KJV.

العودة إلى المقطع

ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.

ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್‌. ಆಮೆನ್‌.

ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.

ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.

ಇದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಐಗುಪ್ತ ದೇಶದ ಅರಣ್ಯದಲ್ಲಿ ವಾದಿಸಿದೆನು; ಈಗಲೂ ನಿಮ್ಮ ಸಂಗಡ ವಾದಿಸಿದೆನು ಎಂದು ದೇವ ರಾದ ಕರ್ತನು ಹೇಳುತ್ತಾನೆ.

ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.

ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.