TSK

TSK · ಅರಣ್ಯಕಾಂಡ 19:21

مراجع Treasury of Scripture Knowledge في Kannada KJV.

العودة إلى المقطع

ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.

ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.

ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.