ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
TSK
TSK · ಙ್ಞಾನೋಕ್ತಿಗಳು 11:24
مراجع Treasury of Scripture Knowledge في Kannada KJV.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.