TSK

TSK · ಙ್ಞಾನೋಕ್ತಿಗಳು 14:1

مراجع Treasury of Scripture Knowledge في Kannada KJV.

العودة إلى المقطع

ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.

ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.

ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.

ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;

ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.