TSK

TSK · ಙ್ಞಾನೋಕ್ತಿಗಳು 14:26

مراجع Treasury of Scripture Knowledge في Kannada KJV.

العودة إلى المقطع

ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.

ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.

ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.

ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.

ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.

ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.

ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.