TSK

TSK · ಙ್ಞಾನೋಕ್ತಿಗಳು 14:8

مراجع Treasury of Scripture Knowledge في Kannada KJV.

العودة إلى المقطع

ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.

ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.

ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?

ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.

ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.