TSK

TSK · ಙ್ಞಾನೋಕ್ತಿಗಳು 15:1

مراجع Treasury of Scripture Knowledge في Kannada KJV.

العودة إلى المقطع

ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.

ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.

ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--

ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.

ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.

ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.