TSK

TSK · ಙ್ಞಾನೋಕ್ತಿಗಳು 15:25

مراجع Treasury of Scripture Knowledge في Kannada KJV.

العودة إلى المقطع

ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.

ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.

ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.

ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.

ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.

ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.

ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.