ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
TSK
TSK · ಙ್ಞಾನೋಕ್ತಿಗಳು 20:1
مراجع Treasury of Scripture Knowledge في Kannada KJV.
ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.