TSK

TSK · ಙ್ಞಾನೋಕ್ತಿಗಳು 21:31

مراجع Treasury of Scripture Knowledge في Kannada KJV.

العودة إلى المقطع

ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.

ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.

ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.

ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.

ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.

ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.