ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
TSK
TSK · ಙ್ಞಾನೋಕ್ತಿಗಳು 29:23
مراجع Treasury of Scripture Knowledge في Kannada KJV.
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.