ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
TSK
TSK · ಙ್ಞಾನೋಕ್ತಿಗಳು 3:1
مراجع Treasury of Scripture Knowledge في Kannada KJV.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.