TSK

TSK · ಙ್ಞಾನೋಕ್ತಿಗಳು 31:9

مراجع Treasury of Scripture Knowledge في Kannada KJV.

العودة إلى المقطع

ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.

ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.

ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.

ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.

ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.

ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.

ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.

ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.

ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ