TSK

TSK · ಙ್ಞಾನೋಕ್ತಿಗಳು 4:26

مراجع Treasury of Scripture Knowledge في Kannada KJV.

العودة إلى المقطع

ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.

ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.

ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.

ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.

ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.

ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.

ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.