TSK

TSK · ಙ್ಞಾನೋಕ್ತಿಗಳು 6:19

مراجع Treasury of Scripture Knowledge في Kannada KJV.

العودة إلى المقطع

ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.

ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.

ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.

ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.

ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.

ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.

ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.

ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.