TSK

TSK · ಙ್ಞಾನೋಕ್ತಿಗಳು 6:23

مراجع Treasury of Scripture Knowledge في Kannada KJV.

العودة إلى المقطع

ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.

ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.

ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.

ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.

ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು