TSK

TSK · ಙ್ಞಾನೋಕ್ತಿಗಳು 7:13

مراجع Treasury of Scripture Knowledge في Kannada KJV.

العودة إلى المقطع

ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.

ಇಗೋ, ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್‌ ಸ್ತ್ರೀಯನ್ನು ತಂದನು.

ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.

ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.

ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.